You are here
Home > Crime News > ಡ್ರೈವರ್ ಸಮಯ ಪ್ರಜ್ಞೆಯಿಂದ 50 ಮಂದಿ ಪಾರು

ಡ್ರೈವರ್ ಸಮಯ ಪ್ರಜ್ಞೆಯಿಂದ 50 ಮಂದಿ ಪಾರು

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜರುಗಿದೆ.

ಮಲೆಮಹದೇಶ್ವರ ಬೆಟ್ಟದ ತಾಳುಬೆಟ್ಟ- ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಸ್ಟೇರಿಂಗ್ ಕಟ್ ಆಗಿದೆ. ಇದನ್ನು ಅರಿತ ಬಸ್ ಚಾಲಕ ಪ್ರಪಾತಕ್ಕೆ ಬೀಳಬೇಕಿದ್ದ ಬಸ್‍ನ್ನು ಮರಕ್ಕೆ ಡಿಕ್ಕಿ ಹೊಡಿಸಿದ್ದಾನೆ.

ಇದ್ದರಿಂದ ಬಾರಿ ಅನಾಹುತ ತಪ್ಪಿ 50 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಮರಕ್ಕೆ ಡಿಕ್ಕಿ ಹೊಡೆದಿರುವ ಪರಿಣಾಮ ಡ್ರೈವರ್ ಸೇರಿದಂತೆ 6 ಮಂದಿಗೆ ಗಾಯಗಳಾಗಿವೆ. ಗಾಯಗೊಂಡಿರುವ ಗಂಗಾಧರ್, ಇಂದ್ರಮ್ಮ, ಸಿದ್ದಯ್ಯ, ಮಹೇಶ್ ಯೋಗಿಣಿ, ಬೆನಕಗೌಡ ಎಂಬವರನ್ನು ಕೊಳ್ಳೆಗಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಅವಘಡಕ್ಕೆ ಬಸ್ ಹದಗೆಟ್ಟಿರುವುದೇ ಮೂಲ ಕಾರಣ ಎಂದು ಹೇಳಲಾಗುತ್ತಿದೆ.
**

Leave a Reply

Top