You are here
Home > Film News > ನಟಿ ರಾಗಿಣಿ ದ್ವಿವೇದಿ ಇಂದು ಬಿಜೆಪಿಗೆ

ನಟಿ ರಾಗಿಣಿ ದ್ವಿವೇದಿ ಇಂದು ಬಿಜೆಪಿಗೆ

ಬೆಂಗಳೂರು : ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ನಟಿ ರಾಗಿಣಿ ದ್ವಿವೇದಿ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ನಟಿ ರಾಗಿಣಿ ಇಂದು ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಇಂದು ಬಿಜೆಪಿಗೆ ಸೇರಿದ ನಂತರ ರಾಗಿಣಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ.

Leave a Reply

Top