You are here
Home > Bakthi > ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಲಯ ಸಿಎಂ ಸಂತಸ

ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಲಯ ಸಿಎಂ ಸಂತಸ

ಬೆಂಗಳೂರು: ನ್ಯೂ ಜೆರ್ಸಿಯ ಸೋಮರ್ಸೆಟ್‍ನ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯ ನಿರ್ಮಿಸುತ್ತಿದೆ. ಇದರ ಭೂಮಿ ಪೂಜೆಗೆ ಸಂಬಂಧಿಸಿ ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಪಾಲ್ಗೊಂಡರು.

ನಂತರ ಮಾತನಾಡಿದ ಎಚ್‍ಡಿಕೆ, “ಆದಿಚುಂಚನಗಿರಿ ಮಹಾಸಂಸ್ಥಾನ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಾಲಯವನ್ನು ನಿರ್ಮಿಸುತ್ತಿದೆ. ಈ ಈ ದೇವಾಲಯವು ಭಾರತೀಯರು, ಅದರಲ್ಲೂ ಕನ್ನಡಿಗರ ಪ್ರಮುಖ ಸಾಂಸ್ಕತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ. ಹೊರದೇಶದಲ್ಲಿರುವ ಕನ್ನಡಿಗರು ತಮ್ಮ ಬೇರನ್ನು ಬಲಪಡಿಸಲು, ಸಂಸ್ಕತಿಯೊಂದಿಗೆ ಬೆಸೆದುಕೊಳ್ಳಲು ಇಂತಹ ಸಾಂಸ್ಕತಿಕ ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ,” ಎಂದು ಅಭಿಪ್ರಾಯಪಟ್ಟರು.
ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಕನ್ನಡಿಗರು ಪಾಲ್ಗೊಳ್ಳಬೇಕು ಎಂದು ಕೋರಿದ ಅವರು, “ನ್ಯೂಜೆರ್ಸಿಯಲ್ಲಿ ನೆಲೆಸಿರುವ ಕನ್ನಡಿಗರು ಈ ದೇವಾಲಯದ ನಿರ್ಮಾಣ ಕಾರ್ಯದಲ್ಲಿ ಮನಃಪೂರ್ವಕವಾಗಿ ಕೈಜೋಡಿಸಬೇಕು,” ಎಂದು ಮನವಿ ಮಾಡಿದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಿವೆ. ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಕುಮಾರಸ್ವಾಮಿಗೆ ಸಾಥ್ ನೀಡಿದ್ದಾರೆ.

Leave a Reply

Top